
ಪಟಾಕಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಾಜೇಶ್ (19) ಎಂಬುವವರು ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ರಾಜೇಶ್ ತಮಿಳುನಾಡು ಮೂಲದವರಾಗಿದ್ದು, ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದರು. ಈ ಮೂಲಕ ಅತ್ತಿಬೆಲೆ ಪಟಾಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 17 ಕ್ಕೇರಿಕೆಯಾಗಿದೆ.
ಅನೇಕಲ್ ಜಿಲ್ಲೆಯ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ದುರಂತದಲ್ಲಿ ಒಟ್ಟು 17 ಮಂದಿ ಮೃತಪಟ್ಟಿದ್ದಾರೆ. ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದಿದ್ದರಿಂದ ಈ ಘಟನೆ ನಡೆದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ಸಂಬಂಧ ಅನೇಕಲ್ ನ ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಅಲ್ಲದೇ ರಾಜ್ಯದಲ್ಲಿ ಹಬ್ಬ, ವಿಶೇಷ ಕಾರ್ಯಕ್ರಮದಲ್ಲಿ ಪಟಾಕಿ ಹೊಡೆಯುವುದನ್ನು ನಿಷೇಧಿಸಲಾಗಿದೆ.

