BREAKING : ಕಾಂಗ್ರೆಸ್ ನಾಯಕ ‘ರಾಹುಲ್ ಗಾಂಧಿ’ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರಿಗೆ ಅಸ್ಸಾಂ ಸಿಎಂ ಸೂಚನೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರಿಗೆ ಅಸ್ಸಾಂ ಸಿಎಂ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, “ಜನಸಮೂಹವನ್ನು ಪ್ರಚೋದಿಸಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲು ಮತ್ತು ನೀವು ಪೋಸ್ಟ್ ಮಾಡಿದ ತುಣುಕನ್ನು ಸಾಕ್ಷ್ಯವಾಗಿ ಬಳಸಲು ನಾನು ಅಸ್ಸಾಂ ಪೊಲೀಸ್ ಡಿಜಿಪಿಗೆ ಸೂಚನೆ ನೀಡಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಮುಖ್ಯ ಮಾರ್ಗಗಳ ಮೂಲಕ ನಗರವನ್ನು ಪ್ರವೇಶಿಸಲು ಅನುಮತಿ ನಿರಾಕರಿಸಿದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ. ಈ ಬೆನ್ನಲ್ಲೇ ಹಲವು ಬೆಳವಣಿಗೆಗಳು ನಡೆದಿದೆ. ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಯಾತ್ರೆ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಕರ್ನಾಟಕದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read