HomeLatest NewsBREAKING: ಸಹಾಯಕ ಜೈಲರ್ ಮೇಲೆ ಸಜಾಬಂಧಿ ಕೈದಿಗಳಿಂದ ಹಲ್ಲೆ, ದೂರು

BREAKING: ಸಹಾಯಕ ಜೈಲರ್ ಮೇಲೆ ಸಜಾಬಂಧಿ ಕೈದಿಗಳಿಂದ ಹಲ್ಲೆ, ದೂರು

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಪುಂಡಾಟ ನಡೆಸಿದ್ದಾರೆ. ಸಹಾಯಕ ಜೈಲರ್ ಮೇಲೆ ಸಜಾಬಂಧಿಗಳು ಹಲ್ಲೆ ನಡೆಯುತ್ತಿರುವ ಆರೋಪ ಕೇಳಿ ಬಂದಿದೆ.

ಸಜಾಬಂಧಿಗಳಾದ ಆನಂದ್ ಮತ್ತು ಅಬ್ದುಲ್ ಘನಿ ಎಂಬುವವರಿಂದ ಕೃತ್ಯ ನಡೆದಿದೆ. ಅನಾವಶ್ಯಕವಾಗಿ ಸಜಾಬಂಧಿ ಕಚೇರಿಗೆ ನುಗ್ಗಲು ಕೈದಿಗಳು ಯತ್ನಿಸಿದ್ದಾರೆ. ಈ ವೇಳೆ ಕೈದಿಗಳನ್ನು ಸಹಾಯಕ ಜೈಲರ್ ತಡೆಯಲು ಮುಂದಾಗಿದ್ದಾರೆ. ಆಗ ಆರೋಪಿಗಳು ಜೈಲು ಸಿಬ್ಬಂದಿಗೆ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಕರ್ತವ್ಯ ನಿರ್ವಹಿಸಲು ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಪ್ರಭಾರ ಅಧೀಕ್ಷಕರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಿಸ್ಥಿತಿ ಕೈ ಮೀರುವ ಬದಲು ಸಿಬ್ಬಂದಿ ರಕ್ಷಣಾ ಕ್ರಮಕ್ಕಾಗಿ ಮನವಿ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಜನವರಿ 7ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ತಡವಾಗಿ ನಿನ್ನೆ ಪರಪ್ಪನ ಅಗ್ರಹಾರ ಠಾಣೆಗೆ ಸಿಬ್ಬಂದಿ ದೂರು ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular