BREAKING: ಯುವಕನ ಮೇಲೆ ಹಲ್ಲೆ, ಕೊಲೆ ಕೇಸ್: ಇನ್ಸ್ ಪೆಕ್ಟರ್ ಸೇರಿ ನಾಲ್ವರು ಪೊಲೀಸರು ಅಮಾನತು

ಬೆಂಗಳೂರು: ಇತ್ತೀಚೆಗೆ ನಡೆದಿದ್ದ ಯುವಕನ ಮೇಲೆ ಹಲ್ಲೆ ಮತ್ತು ಕೊಲೆ ಪ್ರಕರಣ ಸಂಬಂಧ ಕರ್ತವ್ಯಲೋಪದ ಆರೋಪದ ಮೇಲೆ ಬೆಂಗಳೂರಿನ ವಿವೇಕನಗರ ಠಾಣೆಯ ಇನ್ಸ್ ಪೆಕ್ಟರ್ ಸೇರಿ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ವಿವೇಕನಗರ ಠಾಣೆ ಇನ್ಸ್ ಪೆಕ್ಟರ್ ಶಿವಕುಮಾರ್ ಸೇರಿದಂತೆ ನಾಲ್ವರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಆದೇಶಿಸಿದ್ದಾರೆ. ದರ್ಶನ್ ಎಂಬ ಯುವಕನನ್ನು ಅಕ್ರಮವಾಗಿ ವಿವೇಕನಗರ ಠಾಣೆಯಲ್ಲಿ ಇರಿಸಿಕೊಂಡು ಆತನ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿ ನಂತರ ರಿಹ್ಯಾಬ್ ಸೆಂಟರ್ ಗೆ ಕಳುಹಿಸಲಾಗಿತ್ತು.

10 ದಿನದ ನಂತರ ಆತ ಮೃತಪಟ್ಟಿದ್ದ. ಈ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಇನ್ಸ್ ಪೆಕ್ಟರ್ ಶಿವಕುಮಾರ್ ಅಮಾನತು ಬೆನ್ನಲ್ಲೇ ಸಿಸಿಬಿ ಇನ್ಸ್ ಪೆಕ್ಟರ್ ವೀರೇಶ್ ಅವರನ್ನು ವಿವೇಕನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆಗಿ ವರ್ಗಾವಣೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read