ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಇದರಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
23 ವರ್ಷದ ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಹೇಳಲಾಗಿದೆ. ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಬಿ. ಸೀಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರೀತಿ ವಿಷಯ ತಿಳಿದು ನಾಗೇಂದ್ರನ ಮೇಲೆ ಯುವತಿಯ ಸಂಬಂಧಿಕರು ಹಲ್ಲೆ ನಡೆಸಿದ್ದರು. ಯುವತಿಯ ಕುಟುಂಬದ ಜಯಕುಮಾರ್, ಮಂಜು ಸೇರಿ ಐವರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಹಲ್ಲೆಯಿಂದ ಅವಮಾನವಾಗಿದೆ ಎಂದು ಮನನೊಂದು ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬನ್ನೂರು ಪೊಲೀಸ್ ಠಾಣೆಗೆ ನಾಗೇಂದ್ರ ಪೋಷಕರು ದೂರು ನೀಡಿದ್ದು, ಮಗನ ಸಾವಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿದ್ದಾರೆ. ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

