HomeKarnatakaBREAKING : ಬೆಳಗಾವಿಯಲ್ಲಿ C.T ರವಿಗೆ ಮುತ್ತಿಗೆ ಹಾಕಲು ಯತ್ನ : ಸಚಿವೆ' ಲಕ್ಷ್ಮೀ ಹೆಬ್ಬಾಳ್ಕರ್'...

BREAKING : ಬೆಳಗಾವಿಯಲ್ಲಿ C.T ರವಿಗೆ ಮುತ್ತಿಗೆ ಹಾಕಲು ಯತ್ನ : ಸಚಿವೆ’ ಲಕ್ಷ್ಮೀ ಹೆಬ್ಬಾಳ್ಕರ್’ ಬೆಂಬಲಿಗರು ಪೊಲೀಸ್ ವಶಕ್ಕೆ.!

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಆರೋಪ ಕೇಳಿಬಂದಿದ್ದು, ಸಿ.ಟಿ ರವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ದೂರು ನೀಡಿದೆ.

ಇದೀಗ ಬೆಳಗಾವಿ ಸುವರ್ಣಸೌಧದಲ್ಲಿ ಸಿಟಿ ರವಿಗೆ ಮುತ್ತಿಗೆ ಹಾಕಲು ಯತ್ನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 15 ಕ್ಕೂ ಹೆಚ್ಚು ಬೆಂಬಲಿಗರನ್ನು ವಶಕ್ಕೆ ಪಡೆದ ಪೊಲೀಸರು ಹೀರೇಬಾಗೇವಾಡಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸಚಿವರು, ಶಾಸಕರು ಅಮಿತ್ ಶಾ ವಿರುದ್ಧ, ಅಂಬೇಡ್ಕರ್ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸುತ್ತಿದ್ದ ವೇಳೆ, ಪರಿಷತ್ ಸದಸ್ಯ ಸಿ.ಟಿ.ರವಿ ರಾಹುಲ್ ಗಾಂಧಿ ಅವರನ್ನು ನಿಂದಿಸಿದ್ದಾರೆ. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ಷೇಪ ವ್ಯಕ್ತಪಡಿದ್ದಾರೆ. ಇದಕ್ಕೆ ಸಿ.ಟಿ ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವರ ವಿರುದ್ಧ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಮಾಡಿದ್ದಕ್ಕೆ ಸಿಡಿದೆದ್ದಿರುವ ಕಾಂಗ್ರೆಸ್ ನಾಯಕರು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ದೂರು ನೀಡಿದ್ದು, ಸಿ.ಟಿ.ರವಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಭಾಪತಿ ಹೊರಟ್ಟಿ, ಸದನದ ಆಡಿಯೋ, ವಿಡಿಯೋ ಪರಿಶೀಲನೆ ನಡೆಸುವಂತೆ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular