BREAKING : ವಿಧಾನಸೌಧಕ್ಕೆ ಮುತ್ತಿಗೆ ಯತ್ನ : ವಾಟಾಳ್ ನಾಗರಾಜ್ ಸೇರಿ ಹಲವರು ಪೊಲೀಸ್ ವಶಕ್ಕೆ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕನ್ನಡಪರ ಹೋರಾಟಗಾರರು ಪ್ರತಿಭಟನೆ ಮುಂದುವರೆಸಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವಾಟಾಳ್ ನಾಗರಾಜ್ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೇವರಾಜ ಅರಸು ಗೇಟ್ ಬಳಿ ಪೊಲೀಸರು ವಾಟಾಳ್ ನಾಗರಾಜ್, ಕೆ ಆರ್ ಕುಮಾರ್ ಸೇರಿ ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ತಮಿಳುನಾಡಿಗೆ ನೀರು ಬಿಟ್ಟು ಕಾವೇರಿ ಪ್ರಾಧಿಕಾರ ಮತ್ತು ಕಾವೇರಿ ನೀರು ನಿರ್ವಹಣಾ ಸಮಿತಿ ನಮಗೆ ತೀವ್ರ ಅನ್ಯಾಯ ಮಾಡಿದೆ. . ಕೇಂದ್ರ ಸರ್ಕಾರ ನಮ್ಮನ್ನು ಕಡೆಗಣಿಸಿದೆ. ರಾಜ್ಯ ಸರ್ಕಾರ ಯಾವುದೇ ಅಡ್ಡಿ ಆತಂಕ ಇಲ್ಲದೇ ನೀರು ಬಿಡುತ್ತಿದೆ. ಇದರ ವಿರುದ್ಧ ನಾವು ಹೋರಾಟ ನಡೆಸಲಿದ್ದೇವೆ, ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದರು. ಆದರೆ ದೇವರಾಜ ಅರಸು ಗೇಟ್ ಬಳಿ ಪೊಲೀಸರು ವಾಟಾಳ್ ನಾಗರಾಜ್, ಕೆ ಆರ್ ಕುಮಾರ್ ಸೇರಿ ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅ.31 ರವರೆಗೆ ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ CWMA ಸೂಚನೆ ನೀಡಿದ್ದು, CWRA ಆದೇಶ ಎತ್ತಿಹಿಡಿದಿದೆ. ಅ.16 ರಿಂದ ಅ. 31 ರವರೆಗೆ 3000 ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆ ಕನ್ನಡ ಪರ ಸಂಘಟನೆ, ರೈತರಿಂದ ಮತ್ತೆ ಪ್ರತಿಭಟನೆ ಆರಂಭವಾಗಿದೆ.

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read