HomeKarnatakaBIG NEWS : ಅತ್ತಿಬೆಲೆ ಪಟಾಕಿ ದುರಂತ : ಗೋಡೌನ್ ಮಾಲೀಕ ರಾಮಸ್ವಾಮಿ ಪೊಲೀಸ್ ವಶಕ್ಕೆ

BIG NEWS : ಅತ್ತಿಬೆಲೆ ಪಟಾಕಿ ದುರಂತ : ಗೋಡೌನ್ ಮಾಲೀಕ ರಾಮಸ್ವಾಮಿ ಪೊಲೀಸ್ ವಶಕ್ಕೆ

ಬೆಂಗಳೂರು ನಗರ ಜಿಲ್ಲೆ : ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಂಬಂಧಿಸಿದಂತೆ ಗೋಡೌನ್ ಮಾಲೀಕ ರಾಮಸ್ವಾಮಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ.

ಅನೇಕಲ್ ನ ಅತ್ತಿಬೆಲೆ ಪಟಾಕಿ ಅಂಗಡಿಯಲ್ಲಿ ಅಗ್ನಿ ದುರಂತ ಸಂಭವಿಸಿ 14 ಜನರು ಸಾವನ್ನಪ್ಪಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇದೀಗ ಗೋಡೌನ್ ಮಾಲೀಕ ರಾಮಸ್ವಾಮಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ.  ಇದನ್ನು ನಿರ್ವಹಣೆ ಮಾಡುತ್ತಿದ್ದ ರಾಮಸ್ವಾಮಿ ಪುತ್ರ ನವೀನ್ ನನ್ನು ಕೂಡ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 14 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ.ನವೀನ್ ಎಂಬುವರಿಗೆ ಸೇರಿದ ಪಟಾಕಿ ಗೋಡೌನ್ ನಲ್ಲಿ ಘಟನೆ ನಡೆದಿದೆ. ಲಾರಿಯಲ್ಲಿ ತರಲಾಗಿದ್ದ ಪಟಾಕಿ ಗೋದಾಮಿನಲ್ಲಿ ಪಟಾಕಿ ಅನ್ ಲೋಡ್ ಮಾಡುವ ವೇಳೆ ಬೆಂಕಿ ಹೊತ್ತಿಕೊಂಡಿದೆ.ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಹೊತ್ತಿಕೊಂಡ ಬೆಂಕಿ ಸಂಜೆಯವರೆಗೂ ಇಡೀ ಕಟ್ಟಡಕ್ಕೆ ವ್ಯಾಪಿಸಿ ಹೊತ್ತಿ ಉರಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular