HomeKarnatakaBREAKING : 'ಕರಾಮುವಿವಿ' ಯ B.Ed ಪ್ರವೇಶ ಪರೀಕ್ಷೆಯ ಕೀ ಉತ್ತರ ಪ್ರಕಟ, ಈ ರೀತಿ...

BREAKING : ‘ಕರಾಮುವಿವಿ’ ಯ B.Ed ಪ್ರವೇಶ ಪರೀಕ್ಷೆಯ ಕೀ ಉತ್ತರ ಪ್ರಕಟ, ಈ ರೀತಿ ಚೆಕ್ ಮಾಡಿ

ಮೈಸೂರು : ವಿಶ್ವವಿದ್ಯಾನಿಲಯದ 2023-24ನೇ ಶೈಕ್ಷಣಿಕ ಸಾಲಿನ (ಜನವರಿ/ಫೆಬ್ರವರಿ ಆವೃತ್ತಿ) ಬಿ.ಇಡಿ. ಪ್ರವೇಶ ಪರೀಕ್ಷೆಯು ದಿನಾಂಕ: 10-03-2024ರಂದು ನಡೆಸಲಾಗಿದ್ದು, ಸದರಿ ಪರೀಕ್ಷೆಯ ಕೀ-ಉತ್ತರಗಳನ್ನು ವಿಶ್ವವಿದ್ಯಾನಿಲಯದ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

ಕೀ-ಉತ್ತರಗಳ (Key Answers) ಬಗ್ಗೆ ಯಾವುದಾದರು ಆಕ್ಷೇಪಣೆಗಳು ಇದ್ದಲ್ಲಿ ಅಭ್ಯರ್ಥಿಗಳು ದಿನಾಂಕ: 15-03-2024 ಶುಕ್ರವಾರ ರಾತ್ರಿ 11:59 ಗಂಟೆಯ ಒಳಗೆ ಇ-ಮೇಲ್ ವಿಳಾಸ: [email protected] ಗೆ ಸಲ್ಲಿಸುವಂತೆ ಸೂಚಿಸಲಾಗಿದೆ. ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪರೀಕ್ಷಾಂಗ ವಿಭಾಗದ ಕುಲಸಚಿವರು ಪ್ರಕಟಣೆ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular