BREAKING : ಭಾರಿ ಮಳೆ ಹಿನ್ನೆಲೆ : ಮೂಡಿಗೆರೆ, ಕಳಸ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ |School Holiday

ಚಿಕ್ಕಮಗಳೂರು : ಭಾರೀ ಮಳೆ ಹಿನ್ನೆಲೆ ಮೂಡಿಗೆರೆ,  ಕಳಸ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕುಗಳಲ್ಲಿ  ಶಾಲೆಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಪರಮಾನಂದ ಆದೇಶ ಹೊರಡಿಸಿದ್ದಾರೆ. 1ರಿಂದ 10ನೇ ತರಗತಿಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಅವರು ಆದೇಶ ಹೊರಡಿಸಿದ್ದಾರೆ.

ಭಾರಿ ಮಳೆ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ  ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ರಜೆ ಹಿನ್ನೆಲೆ ಮಕ್ಕಳು ಶಾಲೆಯಿಂದ ಮನೆಗೆ ವಾಪಸ್ ತೆರಳುತ್ತಿರುವ ದೃಶ್ಯ ಕಂಡು ಬಂದಿತು.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಅಂಗನವಾಡಿಗಳಿಗೆ ಇಂದು ಕೂಡ ರಜೆ ಘೋಷಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ನೀಡಿ ಆದೇಶ ಹೊರಡಿಸಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತದಿಂದ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರು ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಕಾರಣ ಜೂ. 27 ರಂದು ರಜೆ ನೀಡಲಾಗಿತ್ತು. ಮಳೆ ಮುಂದುವರೆದ ಹಿನ್ನಲೆಯಲ್ಲಿ ಜೂ. 28ರಂದು ಕೂಡ ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read