HomeLatest NewsBREAKING : ಭಾರಿ ಮಳೆ ಹಿನ್ನೆಲೆ : ರಾಜ್ಯದ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು, ನಾಳೆ ರಜೆ...

BREAKING : ಭಾರಿ ಮಳೆ ಹಿನ್ನೆಲೆ : ರಾಜ್ಯದ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು, ನಾಳೆ ರಜೆ ಘೋಷಣೆ |Holiday

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಕೊಡಗಿನಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ ಹಿನ್ನೆಲೆ ಇಂದು ಮತ್ತು ನಾಳೆ 2 ದಿನ ರಜೆ ಘೋಷಿಸಲಾಗಿದೆ.

ಮೇ 29 ಹಾಗೂ 30 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ , ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮೇ 29ರಂದು ರೆಡ್ ಅಲರ್ಟ್ ನೀಡಲಾಗಿದೆ. ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಧಾರವಾಡ, ಬೀದರ್, ಹಾವೇರಿ, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular