ಬೆಂಗಳೂರು: ಮಾಜಿ ಸಂಸದೆ, ನಟಿ ರಮ್ಯಾ ಅವರಿಗೆ ಅಶ್ಲೀಲ ಕಾಮೆಂಟ್ ಮತ್ತು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳಿಗೆ ಹೈಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ನೀಡಲಾಗಿದೆ.
ಪ್ರಮೋದ್, ಮಂಜುನಾಥ್, ರಾಜೇಶ, ಓಬಣ್ಣ, ಗಂಗಾಧರ, ಚಿನ್ಮಯ ಶೆಟ್ಟಿ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಮತ್ತೊಬ್ಬ ಆರೋಪಿ ವಿಕಾಸ್ ಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ.
ಪ್ರಕರಣದಲ್ಲಿ ಈಗಾಗಲೇ ಆರೋಪಪಟ್ಟಿ ದಾಖಲಾಗಿರುವ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣನವರ ಅವರಿದ್ದ ಪೀಠದಿಂದ ಜಾಮೀನು ನೀಡಲಾಗಿದೆ. ಒಂದು ಲಕ್ಷದ ಬಾಂಡ್, ಒಬ್ಬರ ಶ್ಯೂರಿಟಿ ಒದಗಿಸುವಂತೆ ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ.