ಬೆಂಗಳೂರು : ಬೆಂಗಳೂರಿನಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಮುಂದಿನ 5 ದಿನ ಸಂಜೆ ಹಾಗೂ ರಾತ್ರಿ ವೇಳೆ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲೂ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಇಂದು ಸಂಜೆ ಬೆಂಗಳೂರು ನಗರದ ಹಲವು ಕಡೆ ಧಾರಾಕಾರ ಮಳೆಯಾಗಿದೆ. ಮೆಜೆಸ್ಟಿಕ್, ಜಯನಗರ, ಜೆಪಿ ನಗರ, ವಿಜಯನಗರ, ಕೆ ಆರ್ ಪುರಂ, ಟಿನ್ ಪ್ಯಾಕ್ಟರಿ, ಮಾರತಹಳ್ಳಿ ಸೇರಿದಂತೆ ಹಲವು ಕಡೆ ಭಾರಿ ಮಳೆಯಾಗಿದೆ. ಭಾರಿ ಮಳೆ ಹಿನ್ನೆಲೆ ವಾಹನ ಸವಾರರು ಪರದಾಡಿದ್ದಾರೆ. ಬಿಸಿಲ ಬೇಗೆಯಿಂದ ದಣಿದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.
You Might Also Like
TAGGED:ಮುಂದಿನ 5 ದಿನ ಭಾರಿ ಮಳೆ