ಬೆಂಗಳೂರು: ಬೆಂಗಳೂರಿನ ಆರ್.ಆರ್. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಲ್ಫಿ ವಿಡಿಯೋ ಮಾಡಿ ಖಾಸಗಿ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೋಜ್ ಕುಮಾರ್(25) ಆತ್ಮಹತ್ಯೆ ಮಾಡಿಕೊಂಡವರು. ಫ್ಯಾನ್ ಗೆ ನೇಣು ಹಾಕಿಕೊಂಡು ಮನೋಜ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದ ಮನೋಜ್ ಕುಮಾರ್ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕಿನಿಂದ ಸಾಲ ಪಡೆದು ಬೆಟ್ಟಿಂಗ್ ಆಡಿದ್ದರು. ಬೆಟ್ಟಿಂಗ್ ನಲ್ಲಿ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಬೆಟ್ಟಿಂಗ್ ಗೆ ಪ್ರಚೋದನೆ ನೀಡಿದ ಇಬ್ಬರ ಮೇಲೆ ಆರೋಪಿಸಿ ಮನೋಜ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೆಪಿ ನಗರದ ಖಾಸಗಿ ಬ್ಯಾಂಕ್ ಉದ್ಯೋಗಿಗಳಾದ ಅರವಿಂದ್, ಮಹೇಶ್ ನನ್ನ ಸಾವಿಗೆ ಕಾರಣರಾಗಿದ್ದಾರೆ. ಬಡ್ಡಿಗೆ ಹಣ ಕೊಟ್ಟು ಬೆಟ್ಟಿಂಗ್ ಆಡಿಸಿ ಸಾಯುವ ಹಾಗೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ನನ್ನ ಸಾವಿಗೆ ಈ ಇಬ್ಬರು ಕಾರಣ ಎಂದು ಆರೋಪಿಸಿ ಮನೋಜ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.