ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪರಿಶೀಲನೆ ಮುಂದುವರೆದಿದೆ. ಕೈದಿಗಳ ಬ್ಯಾರಕ್ ಮೇಲೆ ದಾಳಿ ಮಾಡಿ ನಿಷೇಧಿತ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಜೈಲಿನ ಟವರ್ 1ರ 6ನೇ ಬ್ಯಾರಕ್ 4ನೇ ಕೊಠಡಿಯ ಮೇಲೆ ದಾಳಿ ಮಾಡಲಾಗಿದೆ. 8 ಮೊಬೈಲ್, 1 ಸಿಮ್, 2 ಚಾರ್ಜರ್, 3 ಈಯರ್ ಫೋನ್ ಪತ್ತೆಯಾಗಿವೆ. ಕಳೆದ ಎರಡು ತಿಂಗಳಿನಿಂದ 200 ಕ್ಕೂ ಹೆಚ್ಚು ಮೊಬೈಲ್ ಗಳನ್ನು ಸೀಜ್ ಮಾಡಲಾಗಿದೆ.
ಕಾರಾಗೃಹ ಡಿಜಿಪಿಯಾಗಿ ಅಲೋಕ್ ಕುಮಾರ್ ನೇಮಕ ಬಳಿಕ ಅಕ್ರಮಕ್ಕೆ ಕಡಿವಾಣ ಹಾಕಲಾಗಿದೆ. ಕಡಿವಾಣ ಹಾಕದಿದ್ದರೆ ಕ್ರಮ ಕೈಗೊಳ್ಳುವುದಾಗಿ ಅವರು ಖಡಕ್ ಎಚ್ಚರಿಕೆ ನೀಡಿದ್ದರು. ಎಚ್ಚೆತ್ತುಕೊಂಡ ಜೈಲಾಧಿಕಾರಿಗಳು ಬ್ಯಾರಕ್ ಗಳ ಮೇಲೆ ದಾಳಿ ಮಾಡಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಜೈಲಾಧಿಕಾರಿಗಳು ನಿರಂತರ ದಾಳಿ ಮಾಡುತ್ತಿದ್ದಾರೆ.

