HomeLatest NewsBREAKING: ದಸರಾ ಉದ್ಘಾಟನೆಗೆ ಅಪಸ್ವರ ಎತ್ತಿದವರ ವಿರುದ್ಧ ಬಾನು ಮುಷ್ತಾಕ್ ಆಕ್ರೋಶ

BREAKING: ದಸರಾ ಉದ್ಘಾಟನೆಗೆ ಅಪಸ್ವರ ಎತ್ತಿದವರ ವಿರುದ್ಧ ಬಾನು ಮುಷ್ತಾಕ್ ಆಕ್ರೋಶ

ಹಾಸನ: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ತಮ್ಮನ್ನು ಆಹ್ವಾನಿಸಿದ್ದಕ್ಕೆ ಅಪಸ್ವರ ಎತ್ತಿದವರ ವಿರುದ್ಧ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಕೋಟ್ಯಂತರ ಕನ್ನಡಿಗರು ಎಷ್ಟೊಂದು ಪ್ರೀತಿ, ಅಭಿಮಾನ ಕೊಡುತ್ತಿದ್ದಾರೆ. ಒಬ್ಬರು ಅಥವಾ ಇಬ್ಬರ ನೆಗೆಟಿವ್ ಗೆ ಯಾಕೆ ಪ್ರತಿಕ್ರಿಯೆ ಕೊಡಬೇಕು ಎಂದು ಪ್ರಶ್ನಿಸಿದ್ದಾರೆ.

ವಿರೋಧ ಪಕ್ಷಗಳು ಮತ್ತು ಆಡಳಿತ ಪಕ್ಷಗಳು ರಾಜಕೀಯ ಮಾಡಬೇಕು. ಆದರೆ ಯಾವುದರಲ್ಲಿ ರಾಜಕೀಯ ಮಾಡಬೇಕೆಂಬ ಪ್ರಜ್ಞೆ ಇರಬೇಕಾಗುತ್ತದೆ. ಬಿಜೆಪಿಯಲ್ಲಿ ಸಂಸದ ಯದುವೀರ್ ಅಂತಹವರ ಸಂತತಿ ಹೆಚ್ಚಾಗಲಿ. ವಿಷಯ ಅನ್ವೇಷಣೆ ಮಾಡಿ ಆ ಬಗ್ಗೆ ದ್ವಂದ್ವ ಇಲ್ಲದೆ ಹೇಳಿಕೆ ನೀಡಬೇಕು. ಬೂಕರ್ ನಂತಹ ಪ್ರಶಸ್ತಿ ಸಿಗುವುದು ಸುಲಭದ ಮಾತಲ್ಲ. ಅದರ ಬಗ್ಗೆಯೂ ಒಂದಿಬ್ಬರು ಬಹಳ ಕೇವಲವಾಗಿ ಮಾತನಾಡುತ್ತಾರೆ. ಆ ಬಗ್ಗೆ ಮಾತನಾಡಲಿ ನನಗೆ ಬೇಸರವಿಲ್ಲ. ಅವರವರ ಮಟ್ಟಕ್ಕೆ ತಕ್ಕ ಹಾಗೆ ಮಾತನಾಡುತ್ತಾರೆ ಮಾತನಾಡಲಿ ಎಂದು ಪರೋಕ್ಷವಾಗಿ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕನ್ನಡದ ಬಾವುಟದ ಬಗ್ಗೆ ಹೇಳಿಕೆ ವಿಚಾರದ ಬಗ್ಗೆ ತಮ್ಮ ವಿರುದ್ಧದ ಆರೋಪಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಕನ್ನಡವನ್ನು ನನ್ನಷ್ಟು ಪ್ರೀತಿಸಿ, ಕನ್ನಡವನ್ನು ನನ್ನಷ್ಟು ಬಳಕೆ ಮಾಡಿ, ಕನ್ನಡವನ್ನು ನನ್ನಷ್ಟು ಅಂತರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಅಲ್ಲಿನವರ ಬಾಯಲ್ಲಿ ಕನ್ನಡ ಎಂದು ಹೇಳಿಸುತ್ತಿದ್ದೇನೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಒಂದೊಂದು ಪುಟ ಓದುತ್ತಿದ್ದೇನೆ. ಅವರು ಬಾಯಿ ಬಿಟ್ಟುಕೊಂಡು ನೋಡುತ್ತಿದ್ದಾರೆ. ನನ್ನಂತೆ ನೀವು ಸಾಧನೆ ಮಾಡಿದ್ರೆ ಟೀಕೆ ಮಾಡಲು ಅರ್ಹತೆ ಸಿಗುತ್ತದೆ. ಇಲ್ಲದೆ ಹೋದರೆ ನಿಮ್ಮ ಯಾವುದೇ ಮಾತಿನಲ್ಲಿ ಸ್ಪಷ್ಟತೆ ಇರುವುದಿಲ್ಲ. ನಂಬಿದವರನ್ನು ಕನ್ನಡ ಯಾವತ್ತೂ ಕೈ ಬಿಡಲ್ಲ. ಇದಕ್ಕೆ ನಾನೇ ಸಾಕ್ಷಿ ಎಂದು ಬಾನು ಮುಷ್ತಾಕ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular