HomeLatest NewsBREAKING : 'ಬಾನು ಮುಷ್ತಾಕ್ 'ಮೈಸೂರು ದಸರಾ' ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ :...

BREAKING : ‘ಬಾನು ಮುಷ್ತಾಕ್ ‘ಮೈಸೂರು ದಸರಾ’ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ : ಸುಪ್ರೀಂಕೋರ್ಟ್ ಆದೇಶ

ಬೆಂಗಳೂರು : ದಸರಾ ಉದ್ಘಾಟನೆಗೆ ‘ಬಾನು ಮುಷ್ತಾಕ್’ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

ಸೆ.22 ರಂದು ದಸರಾ ಉದ್ಘಾಟನೆ ನಡೆಯಲಿದ್ದು, ಆದ್ದರಿಂದ ತುರ್ತು ಅರ್ಜಿ ವಿಚಾರಣೆ ನಡೆಸಬೇಕೆಂದು ಸಿಜೆಐ ಗವಾಯಿ ಮುಂದೆ ಮನವಿ ಮಾಡಲಾಗಿತ್ತು.ಆದರೀಗಬಾನು ಮುಷ್ತಾಕ್’ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು. ನಂತರ ಗೌರವ್ ಎಂಬ ವಕೀಲರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಪ್ರತಾಪ್ ಸಿಂಹ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಜೆ ವಿಭು ಬಖ್ರು, ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ ಪ್ರತಾಪ್ ಸಿಂಹ ಅರ್ಜಿ ವಜಾಗೊಳಿಸಿದೆ. ದಸರಾ ಉದ್ಘಾಟಕರ ಆಯ್ಕೆಯಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ ಎಂದು ಹೇಳಿ ಪ್ರತಾಪ್ ಸಿಂಹ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಮಾಡಿರುವ ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಗುತ್ತದೆ. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆ ಮಾಡಬೇಕೆಂಬ ಸಂಪ್ರದಾಯವಿದೆ. ಬಾನು ಮುಷ್ತಾಕ್ ಹಿಂದೂ ವಿರೋಧಿ. ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದೆ. ಸರ್ಕಾರದ ಕ್ರಮಕ್ಕೆ ತಡೆ ನೀಡಬೇಕು.
ಮೈಸೂರಿನ ರಾಜಮನಎತನದವರೂ ಸರ್ಕಾರದ ನಡೆ ವಿರೋಧಿಸಿದ್ದಾರೆ. ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿಯಾಗಿದೆ. ಬಾನು ಮುಷ್ತಾಕ್ ಅವರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶನ ನೀಡುವಂತೆ ಪ್ರತಾಪ್ ಸಿಂಹ ಮನವಿ ಮಾಡಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular