ದಾವಣಗೆರೆ: ಹಣಕಾಸಿನ ವಿಚಾರಕ್ಕೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ನಡೆದಿದೆ.
46 ವರ್ಷದ ಅತಾವುಲ್ಲಾ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಅಡಕೆ ಕತ್ತರಿಸುವ ಕತ್ತಿ ಮತ್ತು ಮಚ್ಚುಗಳಿಂದ ದುಷ್ಕರ್ಮಿಗಳು ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ತಡರಾತ್ರಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕೃತ್ಯವೆಸಗಿ ಪರಾರಿಯಾಗಿದ್ದಾರೆ.
ಭದ್ರಾವತಿಯ ಶೇಕ್ ದಸ್ತಗಿರಿ, ಜಬೀವುಲ್ಲಾ ಸಹಚರರಿಂದ ಅತಾವುಲ್ಲಾ ಕೊಲೆ ನಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಚನ್ನಗಿರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

