ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಮಾಸುವ ಮೊದಲೇ ಮತ್ತೊಂದು ಕೃತ್ಯ ನಡೆದಿದೆ. ಜನಾರ್ದನ ರೆಡ್ಡಿ, ಶ್ರೀರಾಮುಲು ಅವರಿಗೆ ಸೇರಿದ ಮಾಡೆಲ್ ಹೌಸ್ ಗೆ ಬೆಂಕಿ ಹಚ್ಚಲಾಗಿದೆ. ಪೀಠೋಪಕರಣ, ಕಿಟಕಿ, ಗ್ಲಾಸ್ ಗಳು ಸುಟ್ಟಿವೆ. ಮಾಹಿತಿ ತಿಳಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಜಿ ಸ್ಕ್ವೇರ್ ನಲ್ಲಿರುವ ಮಾಡೆಲ್ ಹೌಸ್ ಗೆ ಬೆಂಕಿ ಹಚ್ಚಲಾಗಿದೆ. ಇದು ಕಾಂಗ್ರೆಸ್ ನವರ ಕೃತ್ಯ. ಬ್ಯಾನರ್ ಗಲಾಟೆ ವೇಳೆ ಬೆಂಕಿ ಹಚ್ಚುತ್ತೇವೆ ಎಂದು ಹೇಳಿದ್ದರು. ಈಗ ಹಚ್ಚಿದ್ದಾರೆ ಎಂದು ಮಾಜಿ ಶಾಸಕ ಸೋಮಶೇಖರ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.
ಮಾಡೆಲ್ ಹೌಸ್ ಗೆ ಪೆಟ್ರೋಲ್, ಡೀಸೆಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ಶಾಸಕ ಭರತ್ ರೆಡ್ಡಿ ಬೆಂಬಲಿಗರು ಇದನ್ನು ಮಾಡಿದ್ದಾರೆ. 100 ಎಕರೆ ಪ್ರದೇಶದಲ್ಲಿ ಲೇಔಟ್ ಮಾಡಲಾಗಿತ್ತು. ಮಾಡೆಲ್ ಹೌಸ್ ನಿರ್ಮಿಸಲಾಗಿತ್ತು. ಆ ಹೌಸ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎಂದು ತಿಳಿಸಿದ್ದಾರೆ.

