ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ಡಿ. 8 ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ. ಅಧಿವೇಶನದ ಹೊತ್ತಿನಲ್ಲೇ ಬೆಳಗಾವಿ ಜಿಲ್ಲೆ ವಿಭಜನೆ ಕೂಗು ಜೋರಾಗಿದೆ.
ಗೋಕಾಕ್ ಜಿಲ್ಲೆ ರಚನೆ ಮಾಡುವಂತೆ ಆಗ್ರಹಿಸಿ ನಾಳೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರ ಬಂದ್ ಗೆ ಕರೆ ನೀಡಲಾಗಿದೆ. ಗೋಕಾಕ್ ನ ಶೂನ್ಯ ಸಂಪಾದನಾ ಮಠದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಾಳೆ ಬಂದ್ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ.
