HomeKarnatakaBREAKING : ಮದುವೆಯಾಗಲು ನಿರಾಕರಿಸಿದ ಪ್ರಿಯತಮೆ : ಹಾಸನದಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ.!

BREAKING : ಮದುವೆಯಾಗಲು ನಿರಾಕರಿಸಿದ ಪ್ರಿಯತಮೆ : ಹಾಸನದಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ.!

ಹಾಸನ : ಮದುವೆಯಾಗಲು ಪ್ರಿಯತಮೆ ನಿರಾಕರಿಸಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಭೈರಾಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

ದರ್ಶನ್ (23) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.ದರ್ಶನ್ ಗಂಡಸಿ ಹೋಬಳಿ ಬೇವಿನಹಳ್ಳಿಯಲ್ಲಿರುವ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದನು. ಇಬ್ಬರು ಕೂಡ ಪರಸ್ಪರ ಪ್ರೀತಿಸಿ ಒಟ್ಟಿಗೆ ಕೂಡ ಓಡಾಡಿದ್ದರು. ಯುವತಿ ಬಿಎ ವ್ಯಾಸಂಗ ಮಾಡುತ್ತಿದ್ದಳು, ಯುವಕ ವ್ಯವಸಾಯ ಮಾಡುತ್ತಿದ್ದನು. ಓದು ಮುಗಿದ ಬಳಿಕ ಮದುವೆಯಾಗೋಣ ಎಂದು ದರ್ಶನ್ ಹೇಳಿದ್ದ.ಆದರೆ ಯುವತಿ ಮದುವೆಗೆ ನಿರಾಕರಿಸಿದ್ದಾಳೆ.

ಇದರಿಂದ ಮನನೊಂದ ದರ್ಶನ್ ವಿಷ ಸೇವಿಸಿದ್ದಾನೆ. ಕೂಡಲೇ ಪೋಷಕರು ಆತನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಯುವಕ ಮೈಸೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular