BREAKING : ತೀವ್ರ ಸ್ವರೂಪ ಪಡೆದ `ಬೆಂಗಳೂರು ಬಂದ್’ : ಹೋಟೆಲ್ ಮೇಲೆ ಕಲ್ಲು ತೂರಾಟ!

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ರೈತ ಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು, ಮಧ್ಯಾಹ್ನದ ನಂತರ ಬೆಂಗಳೂರು ಬಂದ್ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಮೈಸೂರು ಬ್ಯಾಂಕ್ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಈ ಸಂಬಂಧ ವಿವಿಧ ಸಂಘಟನೆಗಳು ಸದಸ್ಯರು, ಮುಖಂಡರು ಮೈಸೂರು ಬ್ಯಾಂಕ್ ವೃತ್ತದತ್ತ ಜಮಾಯಿಸುತ್ತಿದ್ದಾರೆ. ರಾಮನಗರ, ಮಂಡ್ಯ, ಮೈಸೂರು ವ್ಯಾಪ್ತಿಯಲ್ಲಿಯೂ ಸಹ ಪ್ರತಿಭಟನೆಗಳು ನಡೆಯುತ್ತಿವೆ.

ಈ ನಡುವೆ ಕನ್ನಡ ಪರ ಸಂಘಟನೆಯ ಕಾರ್ಯಕರ್ತನೊಬ್ಬ ಬೆಂಗಳೂರು ಬಂದ್ ಗೆ ಬೆಂಬಲ ನೀಡದ ಹೋಟೆಲ್ ಮೇಲೆ ಕಲ್ಲು ತೂರಾಟ ನಡೆಸಿ, ಹೋಟೆಲ್ ಒಳಗೆ ನುಗ್ಗಿ ದಾಂಧಲೆ ನಡೆಸಿದ್ದಾನೆ. ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸರ ಠಾಣೆಗೆ ಹೋಟೆಲ್ ಮಾಲೀಕರು ದೂರು ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read