HomeKarnatakaBREAKING : ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು

BREAKING : ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು

ಬೆಂಗಳೂರು : ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದಾರೆ. ಬೆಳಗಾವಿಯಲ್ಲಿ ನಿನ್ನೆ ರಮೇಶ್ ಜಾರಕಿಹೊಳಿ ಅವರು ಸುದ್ದಿಗೋಷ್ಠಿ ನಡೆಸಿದ ವೇಳೆ ಬಳಸಿದ ಪದಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದಾಶಿವನಗರದ ಪೊಲೀಸ್ ಠಾಣೆಗೆ ದೂರು ನೀಡಿರುವ ಮನೋಹರ್ ಅವರು, ರಮೇಶ್ ಜಾರಕಿಹೊಳಿ ಅವರು ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ದಾಖಲಿಸಿದ್ದಾರೆ.

ಈ ನಡುವೆ ರಮೇಶ್ ಜಾರಕಿಹೊಳಿ ಮನೆಗೆ ಕಿಡಿಗೇಡಿಗಳು ಅಶ್ಲೀಲ ಪೋಸ್ಟರ್ ಅಂಟಿಸಿರುವ ಪ್ರಕರಣ ಸಂಬಂಧ ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಇಂದು ಮತ್ತೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular