BREAKING : ಬೆಂಗಳೂರಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಖಾಸಗಿ ಕಾಲೇಜು ಉಪನ್ಯಾಸಕ ಅರೆಸ್ಟ್

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಿಗೆ ಬಂದಿದ್ದು, ಕೆಲಸ ಕೊಡಿಸುವ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಖಾಸಗಿ ಕಾಲೇಜು ಉಪನ್ಯಾಸಕನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಯಲಹಂಕ ಖಾಸಗಿ ಕಾಲೇಜಿನ ಉಪನ್ಯಾಸಕ ಮದನ್ ಕುಮಾರ್ ಎಂಬಾತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯಾಗಿದ್ದು, ಸದ್ಯ ಗಂಗಮ್ಮನಗುಡಿ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಉಪನ್ಯಾಸಕ ಮದನ್ ಕುಮಾರ್ ಬಳಿ ಕೆಲಸ ಕೊಡಿಸುವಂತೆ ವಿದ್ಯಾರ್ಥಿನಿ ಕೇಳಿದ್ದಳು. ಇದನ್ನೇ ಬಂಡವಾಳ ಮಾಡಿಕೊಂಡಿದ್ದ ಉಪನ್ಯಾಸಕ ಇಂಟರ್ ವ್ಯೂವ್ ಇದೆ ಎಂದು ಹೇಳಿ ಹೋಟೆಲ್ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಬಳಿಕ ವಿಡಿಯೋ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡಿಕೊಂಡಿದ್ದ. ಮದನ್ ಕುಮಾರ್ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದು, ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read