BREAKING : ವರುಣಾರ್ಭಟಕ್ಕೆ ಬೆಂಗಳೂರು ತತ್ತರ : ವಿಡಿಯೋ ಕಾನ್ಪರೆನ್ಸ್ ಮೂಲಕ ಮಳೆಹಾನಿ ಪರಿಶೀಲಿಸಿದ CM ಸಿದ್ದರಾಮಯ್ಯ

ಬೆಂಗಳೂರು : ಮಹಾಮಳೆಗೆ ಬೆಂಗಳೂರು ತತ್ತರಗೊಂಡಿದ್ದು, ವಿಡಿಯೋ ಕಾನ್ಪರೆನ್ಸ್ ಮೂಲಕ ಸಿಎಂ ಸಿದ್ದರಾಮಯ್ಯ ಮಳೆಹಾನಿ ಪರಿಶೀಲಿಸಿದ್ದಾರೆ.

ಧಾರಾಕಾರ ಮಳೆಯಿಂದ ಬೆಂಗಳೂರಿನಲ್ಲಿ ಆಗಿರುವ ಅನಾಹುತಗಳ ಬಗ್ಗೆ ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರಿಂದ ಬಿಬಿಎಂಪಿ ವಾರ್ ರೂಮ್ನಲ್ಲಿ ಮಾಹಿತಿ ಪಡೆದು, ಪರಿಹಾರೋಪಾಯಗಳ ಬಗ್ಗೆ ಸಲಹೆ, ಸೂಚನೆ ನೀಡಿದೆ.

ಇದೇ ವೇಳೆ ಹಾನಿಗೆ ಒಳಗಾಗಿರುವ ಪ್ರದೇಶಗಳ ಅಧಿಕಾರಿಗಳಿಗೆ ಅಗತ್ಯ ಕ್ರಮಗಳನ್ನು ಸರೋಪಾದಿಯಲ್ಲಿ ಕೈಗೊಳ್ಳುವಂತೆ ಕರೆಮಾಡಿ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಶಾಸಕರಾದ ಎನ್.ಎ.ಹ್ಯಾರಿಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜ್, ನಜೀರ್ ಅಹ್ಮದ್, ಪರಿಷತ್ ಸದಸ್ಯರಾದ ಸೀತಾರಾಮ್, ಸುಧಾಮ್ದಾಸ್, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read