ಹಾಸನ: ಹಾಸನದಲ್ಲಿ ಬೆಂಗಳೂರಿನ ರೌಡಿಶೀಟರ್ ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಾಸನ ನಗರದ ಜಿಲ್ಲಾ ನ್ಯಾಯಾಲಯದ ಮುಂಭಾಗ ಘಟನೆ ನಡೆದಿದೆ.
ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ನ್ಯಾಯಾಲಯದ ಮುಂಭಾಗ ಬೆಂಗಳೂರಿನ ಮಂಜೇಶ್(43) ಕೊಲೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಮಂಜೇಶ್ ತಾಯಿ ಹಾಸನ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ರೌಡಿಶೀಟರ್ ಮಂಜೇಶ್ ನೆಲೆಸಿದ್ದ. ಹಾಸನಕ್ಕೆ ಬಂದಿದ್ದಾಗ ಹಂತಕರು ಆತನ ಮೇಲೆ ದಾಳಿ ಮಾಡಿದ್ದಾರೆ. ಮುಖದ ಗುರುತು ಸಿಗದಂತೆ ಕೊಚ್ಚಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಹಾಸನ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

