HomeLatest NewsBREAKING: ಬೆಂಗಳೂರು 7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸ್ ಸಸ್ಪೆಂಡ್

BREAKING: ಬೆಂಗಳೂರು 7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸ್ ಸಸ್ಪೆಂಡ್

ಬೆಂಗಳೂರು: ಬೆಂಗಳೂರಿನಲ್ಲಿ 7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ ಅವರನ್ನು ಅಮಾನತು ಮಾಡಲಾಗಿದೆ.

ಪೂರ್ವ ವಿಭಾಗದ ಡಿಸಿಪಿ ದೇವರಾಜ್ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಹಿನ್ನೆಲೆ ಅಮಾನತು ಮಾಡಲಾಗಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು, ಬೆಂಗಳೂರಿನ ಎಲ್ಲಾ ಪೊಲೀಸ್ ಠಾಣೆಯ ಪಿಎಸ್ಐ, ಎಎಸ್ಐ, ಹೆಡ್ ಕಾನ್ಸ್ಟೇಬಲ್, ಕಾನ್ಸ್ಟೇಬಲ್ ಗಳನ್ನು ಮಾನಿಟರಿಂಗ್ ಮಾಡುವಂತೆ ತಿಳಿಸಿದ್ದಾರೆ. ಸಭೆ ನಡೆಸಿ ರಿಪೋರ್ಟ್ ನೀಡುವಂತೆ ಆಯಾ ವಿಭಾಗದ ಎಸಿಪಿ, ಡಿಸಿಪಿಗಳಿಗೆ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular