ಬೆಂಗಳೂರು: ಬೆಂಗಳೂರಿನಲ್ಲಿ ಬೆಸ್ಕಾಂ ಎಇಇ ಮತ್ತು ವಿದ್ಯುತ್ ಗುತ್ತಿಗೆದಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಜೆಪಿ ನಗರ ಸಮೀಪ ಗೌರವ ನಗರದ ಬೆಸ್ಕಾಂ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ.
ಬೆಸ್ಕಾ ಎಇಇ ಮನೋಜ್ ಕುಮಾರ್ ಮತ್ತು ವಿದ್ಯುತ್ ಗುತ್ತಿಗೆದಾರ ಕಂಠರಾಜು ಲೋಕಾಯುಕ್ತ ಬಲೆಗೆ ಬಿದ್ದವರು. 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ತಾತ್ಕಾಲಿಕವಾಗಿ ಮೀಟರ್ ಗೆ ವಿದ್ಯುತ್ ಪೂರೈಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣವನ್ನು ವಿದ್ಯುತ್ ಗುತ್ತಿಗೆದಾರನಿಗೆ ನೀಡಲು ಸೂಚನೆ ಬೆಸ್ಕಾಂ ಎಇಇ ಸೂಚನೆ ನೀಡಿದ್ದರು.
ರಘುರಾಜ ಎಂಬುವವರಿಂದ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ದಾಳಿ ನಡೆದಿದೆ. ಇಬ್ಬರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

