ಕಲಬುರಗಿ: ಭೀಮ್ ಆರ್ಮಿ ಮುಖಂಡನ ಕಾರ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಕಲಬುರಗಿ ನಗರದ ಶಹಾಬಾದ್ ರಿಂಗ್ ರಸ್ತೆಯ ಬಳಿ ನಡೆದಿದೆ.
ತಡರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ ಕಾರ್ ಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಭೀಮ್ ಆರ್ಮಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಹುಗ್ಗಿ ಅವರ ಕಾರ್ ಗೆ ಬೆಂಕಿ ಹಚ್ಚಲಾಗಿದೆ. ಆರ್.ಎಸ್.ಎಸ್. ಪಥಸಂಚಲನ ವಿರುದ್ಧದ ಹೋರಾಟದ ಮುಂದಾಳತ್ವ ವಹಿಸಿದ್ದ ಸತೀಶ್ ಅವರ ಕಾರ್ ಗೆ ಬೆಂಕಿ ಹಚ್ಚಲಾಗಿದೆ.
ಆರ್.ಎಸ್.ಎಸ್. ಕುಮ್ಮಕ್ಕಿನಿಂದ ಕಾರ್ ಗೆ ಬೆಂಕಿ ಹಾಕಿರುವ ಆರೋಪ ಕೇಳಿ ಬಂದಿದೆ. ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
