HomeLatest NewsBREAKING: RSS ಪಥಸಂಚಲನ ವಿರುದ್ಧ ಹೋರಾಟ ನಡೆಸಿದ್ದ ಭೀಮ್ ಆರ್ಮಿ ಮುಖಂಡನ ಕಾರ್ ಗೆ ತಡರಾತ್ರಿ...

BREAKING: RSS ಪಥಸಂಚಲನ ವಿರುದ್ಧ ಹೋರಾಟ ನಡೆಸಿದ್ದ ಭೀಮ್ ಆರ್ಮಿ ಮುಖಂಡನ ಕಾರ್ ಗೆ ತಡರಾತ್ರಿ ದುಷ್ಕರ್ಮಿಗಳಿಂದ ಬೆಂಕಿ

ಕಲಬುರಗಿ: ಭೀಮ್ ಆರ್ಮಿ ಮುಖಂಡನ ಕಾರ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಕಲಬುರಗಿ ನಗರದ ಶಹಾಬಾದ್ ರಿಂಗ್ ರಸ್ತೆಯ ಬಳಿ ನಡೆದಿದೆ.

ತಡರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ ಕಾರ್ ಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಭೀಮ್ ಆರ್ಮಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಹುಗ್ಗಿ ಅವರ ಕಾರ್ ಗೆ ಬೆಂಕಿ ಹಚ್ಚಲಾಗಿದೆ. ಆರ್‌.ಎಸ್.ಎಸ್. ಪಥಸಂಚಲನ ವಿರುದ್ಧದ ಹೋರಾಟದ ಮುಂದಾಳತ್ವ ವಹಿಸಿದ್ದ ಸತೀಶ್ ಅವರ ಕಾರ್ ಗೆ ಬೆಂಕಿ ಹಚ್ಚಲಾಗಿದೆ.

ಆರ್.ಎಸ್.ಎಸ್. ಕುಮ್ಮಕ್ಕಿನಿಂದ ಕಾರ್ ಗೆ ಬೆಂಕಿ ಹಾಕಿರುವ ಆರೋಪ ಕೇಳಿ ಬಂದಿದೆ. ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular