ಬೆಂಗಳೂರು: ಕೆನರಾ ಬ್ಯಾಂಕ್, ಹೆಚ್.ಡಿ.ಎಫ್.ಸಿ. ಬ್ಯಾಂಕ್ ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಬಂಧಿಸಲಾಗಿದೆ.
ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಹಸನ್ ಸಾಬ್ ಎಂಬುವನನ್ನು ಬಂಧಿಸಿದ್ದಾರೆ. ಸಾಲ ತೀರಿಸಲು ಕಳ್ಳತನಕ್ಕೆ ಯತ್ನಿಸಿದ್ದಾಗಿ ಹಸನ್ ಸಾಬ್ ಒಪ್ಪಿಕೊಂಡಿದ್ದಾನೆ. ಶನಿವಾರ ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಶೇಷಾದ್ರಿಪುರಂ ಕೆನರಾ ಬ್ಯಾಂಕ್ ನ ಗ್ರಿಲ್ ಕತ್ತರಿಸಿ ಒಳಗೆ ನುಗ್ಗಿದ ಹಸನ್ ಸಾಬ್ ಕಳ್ಳತನಕ್ಕೆ ಯತ್ನಿಸಿದ್ದ. ಈ ವೇಳೆ ಸೈರನ್ ಮೊಳಗಿದ್ದರಿಂದ ಭಯದಿಂದ ಓಡಿ ಹೋಗಿದ್ದ.
ಕಬ್ಬನ್ ಪೇಟೆಯ ಹೆಚ್.ಡಿ.ಎಫ್.ಸಿ. ಬ್ಯಾಂಕ್ ಎಟಿಎಂನಲ್ಲೂ ಕೂಡ ಕಳವಿಗೆ ಯತ್ನಿಸಿದ್ದ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

