BREAKING : ರಾಜ್ಯದ ವರ್ತಕರಿಗೆ ಬಿಗ್ ರಿಲೀಫ್ : 3 ವರ್ಷದ ಬಾಕಿ ತೆರಿಗೆ ವಸೂಲಿ ಮಾಡಲ್ಲ -CM ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯದ ವರ್ತಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, 3 ವರ್ಷದ ಬಾಕಿ ತೆರಿಗೆ ವಸೂಲಿ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

40 ಲಕ್ಷ ರೂ ವ್ಯವಹಾರ ನಡೆಸಿದ್ದಕ್ಕೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯ ವರ್ತಕರಿಗೆ ನೋಟಿಸ್ ಜಾರಿ ಮಾಡಿದ್ದಕ್ಕೆ ಭಾರಿ ಟೀಕೆ ವ್ಯಕ್ತವಾಗಿತ್ತು, ಆದ್ದರಿಂದ ಜುಲೈ 25 ರಂದು ವರ್ತಕರು ಅಂಗಡಿ ಮುಂಗಟ್ಟು ಬಂದ್ ಮಾಡಲು ತೀರ್ಮಾನಿಸಿದ್ದರು. ಈ ಬೆನ್ನಲ್ಲೇ ವರ್ತಕರ ಸಂಘದ ಪ್ರತಿನಿಧಿಗಳ ಜೊತೆ ಸಿಎಂ ಸಭೆ ನಡೆಸಿದ್ದರು.
ನೋಟಿಸ್ ನೀಡಿದ ವರ್ತಕರಿಂದ ಬಾಕಿ ತೆರಿಗೆ ವಸೂಲಿ ಮಾಡಲ್ಲ, ಆದರೆ ವರ್ತಕರು ನೋಂದಣಿ ಮಾಡಿಕೊಳ್ಳಬೇಕು. ಈಗ ಕೊಟ್ಟಿರುವ ನೋಟಿಸ್ ಮೇಲೆ ವಸೂಲಾತಿ ಕ್ರಮ ಕೈಗೊಳ್ಳುವುದಿಲ್ಲ ಎಂದರು. ಜಿಎಸ್ ಟಿ ಗೊಂದಲಕ್ಕೆ ಸಹಾಯವಾಣಿ ತೆರೆಯುತ್ತೇವೆ. ಜಿಎಸ್ ಟಿ ಬಗ್ಗೆ ಇನ್ನಷ್ಟು ಕಾರ್ಯಕ್ರಮ ಮಾಡಲು ತೀರ್ಮಾನಿಸಿದ್ದೇವೆ ಎಂದರು.

ಜುಲೈ 25 ರಂದು ಕರೆ ನೀಡಿದ್ದ ವರ್ತಕರ ಬಂದ್ ವಾಪಸ್ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಕರೆ ನೀಡಲಾಗಿದ್ದ ಬಂದ್ ನ್ನು ವರ್ತಕರು ವಾಪಸ್ ಪಡೆದಿದ್ದು, ಎಂದಿನಂತೆ ಎಲ್ಲಾ ವ್ಯಾಪಾರ, ವಹಿವಾಟು ನಡೆಯಲಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ವರ್ತಕರ ಸಂಘ, ಎಫ್ ಕೆ ಸಿಸಿಐ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ್ದ ಸಭೆ ಬಳಿಕ ಸಣ್ಣ ವರ್ತಕರು ಬಂದ್ ನಿರ್ಧಾರ ಕೈಬಿಡಲು ಒಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇನ್ಮುಂದೆ ಜಿಎಸ್ ಟಿ ನೋಂದಣಿ ಕಡ್ದಾಯವಾಗಿದ್ದು, ವಿನಾಯ್ತಿ ಇದ್ದವರಿಗೆ ನೋಂದಣಿ ಅಗತ್ಯವಿಲ್ಲ. ಬ್ರೆಡ್, ಹಾಲು, ತರಕಾರಿ, ಅಗತ್ಯವಸ್ತುಗಳಿಗೆ ಜಿಎಸ್ ಟಿ ಇರುವುದಿಲ್ಲ ಎಂದು ತಿಳಿಸಿದ್ದೇವೆ. ಇದಕ್ಕೆ ವ್ಯಾಪಾರಿಗಳು ಒಪ್ಪಿದ್ದಾರೆ. ಎಲ್ಲಾ ಮಾದರಿಯ ಹೋರಾಟ ಕೈಬಿಡಲು ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read