BREAKING: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗೆ ಬಿಗ್ ಶಾಕ್: ಲೋಕಾಯುಕ್ತ ಪೊಲೀಸರಿಂದ ದಾಳಿ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಕೃಷಿ ಇಲಾಖೆ ಅಧಿಕಾರಿಗೆ ಲೋಕಾಯುಕ್ತ ಪೊಲೀಸರು ಶಾಕ್ ನೀಡಿದ್ದಾರೆ. ಕೃಷಿ ಇಲಾಖೆ ಎಡಿ ಚಂದ್ರಕಾಂತ್ ಅವರ ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.

ಎರಡು ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಚಿತ್ರದುರ್ಗದ ತರಳಬಾಳು ನಗರದಲ್ಲಿರುವ ಅಧಿಕಾರಿ ಚಂದ್ರಕಾಂತ್ ಮನೆ, ಕೃಷಿ ಇಲಾಖೆ ಕಚೇರಿಯಲ್ಲಿ, ಹಾಗೂ ಹೊಳಲ್ಕೆರೆ ತಾಲೂಕಿನ ಟಿ. ನುಲೇನೂರು ಗ್ರಾಮದ ಮನೆಯಲ್ಲಿಯೂ ಶೋಧ ನಡೆಸಲಾಗಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.

ದಾವಣಗೆರೆಯಲ್ಲಿ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆ.ಆರ್.ಐ.ಡಿ.ಎಲ್. ಸಹಾಯಕ ಇಂಜಿನಿಯರ್ ಜಗದೀಶ್ ನಾಯಕ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಎಸ್.ಡಿ.ಎ. ನಡುವಿನಮನೆ ಅವರ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಇಬ್ಬರು ಅಧಿಕಾರಿಗಳಿಗೆ ಸೇರಿದ 10 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ನಿಗದಿಗಿಂತ ಅಧಿಕ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read