HomeIndiaBREAKING : ಕರ್ನಾಟಕಕ್ಕೆ ಬಿಗ್ ಶಾಕ್ : ಅ.15 ರವರೆಗೆ ಪ್ರತಿದಿನ ತಮಿಳುನಾಡಿಗೆ 3 ಸಾವಿರ...

BREAKING : ಕರ್ನಾಟಕಕ್ಕೆ ಬಿಗ್ ಶಾಕ್ : ಅ.15 ರವರೆಗೆ ಪ್ರತಿದಿನ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ‘CWMA’ ಆದೇಶ

ನವದೆಹಲಿ : ಕರ್ನಾಟಕಕ್ಕೆ ಬಿಗ್ ಶಾಕ್ ಎದುರಾಗಿದ್ದು, ಅ.15 ರವರೆಗೆ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWMA ಕರ್ನಾಟಕಕ್ಕೆ ಆದೇಶ ಹೊರಡಿಸಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ರಾಜ್ಯದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಇದರ ನಡುವೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತುರ್ತು ಸಭೆಯನ್ನು ಕರೆದಿತ್ತು. ಈ ಸಭೆಯಲ್ಲಿ CWRC ಆದೇಶ ಪಾಲಿಸುವಂತೆ CWMA ಕರ್ನಾಟಕ್ಕೆ ಸೂಚನೆ ನೀಡಿದೆ.ಅ.15 ರವರೆಗೆ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWMA ಕರ್ನಾಟಕಕ್ಕೆ ಆದೇಶ ಹೊರಡಿಸಿದೆ.

ಕಾವೇರಿ ನ್ಯಾಯಮಂಡಳಿ ಮತ್ತು ಸುಪ್ರೀಂ ಕೋರ್ಟ್ನ ಅಂತಿಮ ತೀರ್ಪಿನ ಆಧಾರದ ಮೇಲೆ ಕರ್ನಾಟಕ ತಮಿಳುನಾಡಿಗೆ ಕಾವೇರಿ ನೀರು ಬಿಡಬೇಕು ಎನ್ನುವ ಒತ್ತಾಯ ತಮಿಳುನಾಡು ಹೇರಿದೆ. ಇತ್ತ ಕರ್ನಾಟಕದಲ್ಲಿ ಕುಡಿಯಲು ನೀರಿಲ್ಲ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಪ್ರತಿಭಟನೆಗಳು ನಡೆಯುತ್ತಿದೆ. ಈ ಹಿನ್ನೆಲೆ ಸೆ.29 ರಂದು ಇಂದು ಕರ್ನಾಟಕ ಬಂದ್ ಗೆ ಕೂಡ ಕರೆ ನೀಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕನ್ನಡ ಪರ ಸಂಘಟನೆಗಳು ಇಂದು ಪ್ರತಿಭಟನೆ ತೀವ್ರಗೊಳಿಸಿದ್ದು, ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಹೋರಾಟಗಾರರು ರಾಜ್ಯ ಸರ್ಕಾರ ಹಾಗೂ ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular