ಕೋಲಾರ: ಮನೆಯ ಬೀಗ ಒಡೆದು ಲಕ್ಷಾಂತರ ರೂಪಾಯಿ ಮೌಲ್ಯದ ನಗದು, ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಕೋಲಾರ ಜಿಲ್ಲೆ ಮುಳಬಾಗಿಲು ನಗರದ ತ್ಯಾಗರಾಜ ಕಾಲೋನಿಯಲ್ಲಿ ಘಟನೆ ನಡೆದಿದೆ.
ಕಾರ್ತಿಕ್ ಮೆಡಿಕಲ್ಸ್ ಮಾಲೀಕ ಮಂಜುನಾಥ್ ಎಂಬುವರ ಮನೆಯಲ್ಲಿ ಘಟನೆ ನಡೆದಿದೆ. 30.5 ಲಕ್ಷ ರೂಪಾಯಿ ನಗದು, 102 ಗ್ರಾಂ ಚಿನ್ನಾಭರಣ ಕಳವು ಮಾಡಲಾಗಿದೆ. ಮಂಜುನಾಥ್ ಕುಟುಂಬದವರು ಪ್ರವಾಸಕ್ಕೆ ಹೋಗಿದ್ದಾಗ ಕಳ್ಳರು ಕೃತ್ಯ ಎಸಗಿದ್ದಾರೆ. ಮುಳಬಾಗಿಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

