ಕೊಪ್ಪಳ: ಕೊಪ್ಪಳದ ಗವಿಸಿದ್ದಪ್ಪ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪೋಕ್ಸೋ ಕೇಸ್ ದಾಖಲಿಸಲಾಗಿದೆ. ಹತ್ಯೆಗೆ ಕಾರಣ ಎನ್ನಲದ ಬಾಲಕಿಯ ತಾಯಿ ದೂರು ನೀಡಿದ್ದು, ಕೊಪ್ಪಳ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.
ಅಪ್ರಾಪ್ತೆ ತಾಯಿಯಿಂದ ದೂರು ದಾಖಲದ ಹಿನ್ನೆಲೆಯಲ್ಲಿ ಗವಿಸಿದ್ದಪ್ಪ ವಿರುದ್ಧ ಕೊಪ್ಪಳ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಿಸಲಾಗಿದೆ. ಗವಿಸಿದ್ದಪ್ಪ ಸೇರಿದಂತೆ ನಾಲ್ವರ ವಿರುದ್ಧ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡಿದ್ದಾರೆ. ಹತ್ಯೆಯಾದ ಗವಿಸಿದ್ದಪ್ಪ, ಗವಿಸಿದ್ದಪ್ಪ ಅವರ ತಂದೆ ನಿಂಗಜ್ಜ ನಾಯಕ, ತಾಯಿ ದೇವಮ್ಮ, ಸಹೋದರಿ ಅನ್ನಪೂರ್ಣ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಆಗಸ್ಟ್ 3ರಂದು ಕೊಪ್ಪಳದ ವಾರ್ಡ್ ನಂಬರ್ ಮೂರರಲ್ಲಿ ಗವಿಸಿದ್ದಪ್ಪ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಕೊಲೆ ಪ್ರಕರಣ ರಾಜಕೀಯ ಜಟಾಪಟಿಗೆ ಕಾರಣವಾಗಿತ್ತು. ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸುವಂತೆ ಬಿಜೆಪಿ ಆಗ್ರಹಿಸಿತ್ತು. ಅದಾದ ಮರುದಿನವೇ ಬಾಲಕಿಯ ತಾಯಿ ಪ್ರತ್ಯಕ್ಷರಾಗಿ ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಗವಿಸಿದ್ದಪ್ಪ ಹತ್ಯೆಯಲ್ಲಿ ನನ್ನ ಮಗಳ ಪಾತ್ರವಿಲ್ಲವೆಂದು ಹೇಳಿದ್ದರು.
ಇದೀಗ ಅಪ್ರಾಪ್ತ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಬಾಲಕಿ ತಾಯಿಯ ದೂರಿನ ಆಧಾರದಲ್ಲಿ ಪೋಕ್ಸೋ ಕೇಸ್ ದಾಖಲಿಸಿಕೊಳ್ಳಲಾಗಿದೆ.