ರಾಯಚೂರು: ಸೇತುವೆ ಮೇಲಿಂದ ಪತಿಯನ್ನು ನದಿಗೆ ತಳ್ಳಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತಿ ತಾತಪ್ಪನ ವಿರುದ್ಧ ರಾಯಚೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತಾತಪ್ಪ ಬಾಲ್ಯ ವಿವಾಹವಾಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ರಾಯಚೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 15 ವರ್ಷ 8 ತಿಂಗಳ ಅಪ್ರಾಪ್ತೆಯನ್ನು ತಾತಪ್ಪ ಮದುವೆಯಾಗಿದ್ದಾರೆ. ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಬಾಲಕಿ ಮದುವೆಯಾದ ತಾತಪ್ಪ, ಆತನ ತಾಯಿ ಮತ್ತು ಅಪ್ರಾಪ್ತೆಯ ತಾಯಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದೇವಸುಗೂರು ಪಿಡಿಒ ರವಿಕುಮಾರ್ ದೂರಿನ ಅನ್ವಯ ಕೇಸು ದಾಖಲಿಸಲಾಗಿದೆ. ಬಾಲಕಿಯನ್ನು ರಕ್ಷಣೆ ಮಾಡಿದ ಯಾದಗಿರಿ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಯಾದಗಿರಿ ಜಿಲ್ಲಾ ಬಾಲಕಿಯರ ಬಾಲ ಮಂದಿರಕ್ಕೆ ಅಪ್ರಾಪ್ತೆಯನ್ನು ಶಿಫ್ಟ್ ಮಾಡಿದ್ದಾರೆ.