HomeKarnatakaBIG UPDATE : ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ 10 ವರ್ಷದ ಬಾಲಕಿ ಸಾವಿಗೆ...

BIG UPDATE : ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ 10 ವರ್ಷದ ಬಾಲಕಿ ಸಾವಿಗೆ ಬಿಗ್ ಟ್ವಿಸ್ಟ್..!

ಬೆಂಗಳೂರು : ಬೆಂಗಳೂರಿನಲ್ಲಿ ಅಪಾರ್ಟ್ ಮೆಂಟ್ ನ ಈಜುಕೊಳದಲ್ಲಿ ವಿದ್ಯುತ್ ಶಾಕ್ ನಿಂದ ಬಾಲಕಿ ಮೃತಪಟ್ಟಿದ್ದಾಳೆ ಎಂದು ಹೇಳಲಾದ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಸ್ವಿಮ್ಮಿಂಗ್ ಪೂಲ್ ಗೆ ಬಿದ್ದು ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಮೃತ ಬಾಲಕಿ ಮಾನಸ ತಂದೆ ರಾಜೇಶ್ ವರ್ತೂರು ಠಾಣೆಗೆ ದೂರು ನೀಡಿದ್ದಾರೆ. ಮಗಳು ಈಜುಕೊಳದಲ್ಲಿ ಬಿದ್ದು ಮೃತಪಟ್ಟಿದ್ದಾಳೆ ಎಂದು ದೂರು ನೀಡಿದ್ದಾರೆ. ಮೊದಲು ವಿದ್ಯುತ್ ಶಾಕ್ ನಿಂದ ಬಾಲಕಿ ಮೃತಪಟ್ಟಿದ್ದಳು ಎಂದು ಹೇಳಲಾಗಿತ್ತು. ಅದೇನೆ ಇರಲಿ ಬಾಲಕಿ ಸಾವಿಗೆ ನಿಖರ ಕಾರಣವೇನೆಂಬುದು ಮರಣೋತ್ತರ ಪರೀಕ್ಷೆಯ ಬಳಿಕ ಗೊತ್ತಾಗಲಿದೆ.  ಘಟನೆ ಸಂಬಂಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಾಲಕಿ ಸಾವಿಗೆ ನ್ಯಾಯ ಕೊಡಿಸುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ವರ್ತೂರು ಸಮೀಪದ ಗುಂಜೂರಿನ ಅಪಾರ್ಟ್ಮೆಂಟ್ ನ ಈಜುಕೊಳದಲ್ಲಿ ಗುರುವಾರ ತಡರಾತ್ರಿ ವಿದ್ಯುತ್ ಸ್ಪರ್ಶದಿಂದ 10 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ ಎಂದು ಹೇಳಲಾಗಿತ್ತು, ಈಜುಕೊಳದಲ್ಲಿ ಬಿದ್ದಿದ್ದ ಚೆಂಡನ್ನು ತರಲು ಹೋದಾಗ ವಿದ್ಯುತ್ ಶಾಕ್ ನಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular