HomeKarnatakaBREAKING : 'ಬಿಗ್ ಬಾಸ್' ಮಾಜಿ ಸ್ಪರ್ಧಿ ವಿನಯ್ ಗೌಡ ಹಾಗೂ ರಜತ್ ಮತ್ತೆ...

BREAKING : ‘ಬಿಗ್ ಬಾಸ್’ ಮಾಜಿ ಸ್ಪರ್ಧಿ ವಿನಯ್ ಗೌಡ ಹಾಗೂ ರಜತ್ ಮತ್ತೆ ಪೊಲೀಸ್ ವಶಕ್ಕೆ.!

ಬೆಂಗಳೂರು: ಲಾಂಗ್ ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಹಾಗೂ ರಜತ್ ಇಬ್ಬರೂ ವಿಚಾರಣೆಗೆ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ಇದೀಗ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇಬ್ಬರನ್ನು ಕರೆದೊಯ್ದು ಪೊಲೀಸರು ಸ್ಥಳ ಮಹಜರು ನಡೆಸಲು ಮುಂದಾಗಿದ್ದಾರೆ.ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಶಸ್ತ್ರಾಸ್ತ್ರ ತಡೆ ಕಾಯ್ದೆಯಡಿ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಹಾಗೂ ರಜತ್ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ನಿನ್ನೆ ನಡೆದ ವಿಚಾರಣೆ ವೇಳೆ ರೀಲ್ಸ್ ನಲ್ಲಿ ಹಿಡಿದಿದ್ದು ಒರಿಜಿನಲ್ ಮಚ್ಚಲ್ಲ, ಫೈಬರ್ ಮಚ್ಚು ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದರು. ಅಲ್ಲದೇ ರೀಲ್ಸ್ ವಿಡಿಯೋಗೆ ಬಳಸಲಾದ ಮಚ್ಚು ಎಂದು ಫೈಬರ್ ಮಚ್ಚನ್ನು ಪೊಲೀಸರ ಮುಂದೆ ಒಪ್ಪಿಸಿ, ಸುಳ್ಳು ಹೇಳಿ ತನಿಖೆಯ ದಾರಿ ತಪ್ಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ನಿಟ್ಟಿನಲ್ಲಿ ಇಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು.ಪೊಲೀಸರ ಸೂಚನೆ ಮೇರೆಗೆ ಇಂದು ವಿನಯ್ ಹಾಗೂ ರಜತ್ ಬಸವೇಶ್ವರ ನಗರ ಠಾಣೆಗೆ ವಿಚಾರಣೆ ಹಾಜರಾಗಿದ್ದರು.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular