ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆ ಬಿಡದಿ ಸಮೀಪ ಇರುವ ಕೈಗಾರಿಕಾ ಪ್ರದೇಶದಲ್ಲಿ ‘ಬಿಗ್ ಬಾಸ್’ ಶೋ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋ ಸೀಜ್ ಮಾಡಲಾಗಿದೆ.
‘ಬಿಗ್ ಬಾಸ್’ ಮನೆಯನ್ನು ಗೇಟ್ ಗೆ ಬೀಗ ಜಡಿದು ಬಂದ್ ಮಾಡಲಾಗಿದೆ. ಜಿಲ್ಲಾಡಳಿತದ ಅಧಿಕಾರಿಗಳು ಗೇಟ್ ಬಂದ್ ಮಾಡಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ಈ ಬೆಳವಣಿಗೆ ನಡುವೆಯೇ ‘ಬಿಗ್ ಬಾಸ್’ ಮನೆಯಿಂದ ಎಲ್ಲಾ ಸ್ಪರ್ಧಿಗಳು, ಸಿಬ್ಬಂದಿ ಹೊರಗೆ ಹೋಗಿದ್ದಾರೆ. ಅಧಿಕಾರಿಗಳು, ಪೊಲೀಸರು ಮನೆಗೆ ಪ್ರವೇಶಿಸುವ ಮುನ್ನವೇ ‘ಬಿಗ್ ಬಾಸ್’ ಸ್ಪರ್ಧಿಗಳು ಮನೆಯನ್ನು ಖಾಲಿ ಮಾಡಿದ್ದಾರೆ. ಸ್ಪರ್ಧಿಗಳು ಇಲ್ಲ, ಸಿಬ್ಬಂದಿಯೂ ಇಲ್ಲ. ‘ಬಿಗ್ ಬಾಸ್’ 12ನೇ ಸೀಸನ್ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್ ಬಾಸ್ ಮನೆ ಸಂಪೂರ್ಣ ಖಾಲಿಯಾಗಿದೆ.