HomeLatest NewsBREAKING: ‘ಬಿಗ್ ಬಾಸ್’ ಚಿತ್ರೀಕರಣ ಬಂದ್: ಮನೆಯಿಂದ ಹೊರಬಂದ ಎಲ್ಲಾ ಸ್ಪರ್ಧಿಗಳು ಅಜ್ಞಾತ ಸ್ಥಳಕ್ಕೆ ಶಿಫ್ಟ್

BREAKING: ‘ಬಿಗ್ ಬಾಸ್’ ಚಿತ್ರೀಕರಣ ಬಂದ್: ಮನೆಯಿಂದ ಹೊರಬಂದ ಎಲ್ಲಾ ಸ್ಪರ್ಧಿಗಳು ಅಜ್ಞಾತ ಸ್ಥಳಕ್ಕೆ ಶಿಫ್ಟ್

ರಾಮನಗರ: ಕನ್ನಡ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 12ರ ಚಿತ್ರೀಕರಣ ಸ್ಥಗಿತಗೊಳಿಸಲಾಗಿದ್ದು, ಎಲ್ಲಾ ಸ್ಪರ್ಧಿಗಳನ್ನು ಮನೆಯಿಂದ ಹೊರಗೆ ಕರೆತರಲಾಗಿದೆ.

ಸಂಜೆ 6:30ಕ್ಕೆ ಶೋ ಚಿತ್ರೀಕರಣ ಸ್ಥಗಿತಗೊಳಿಸಲಾಗಿದೆ. ‘ಬಿಗ್ ಬಾಸ್’ ಮನೆಯಿಂದ ಸ್ಪರ್ಧಿಗಳು ಹೊರಗೆ ಬಂದಿದ್ದಾರೆ. ಮಾಲಿನ್ಯ ನಿಯಂತ್ರಣ ನಿಯಮ ಉಲ್ಲಂಘನೆ ಕಾರಣಕ್ಕೆ ‘ಬಿಗ್ ಬಾಸ್’ ಶೋ ನಡೆಯುತ್ತಿದ್ದ ಬೆಂಗಳೂರು ದಕ್ಷಿಣ ಜಿಲ್ಲೆ ಬಿಡದಿ ಕೈಗಾರಿಕಾ ಪ್ರದೇಶದಲ್ಲಿನ ಜಾಲಿವುಡ್ ಸ್ಟುಡಿಯೋ ಗೇಟ್ ಗೆ ಬೀಗ ಜಡಿಯಲಾಗಿದೆ. ‘ಬಿಗ್ ಬಾಸ್’ ಮನೆಗೂ ಅಧಿಕಾರಿಗಳು ಬೀಗ ಜಡಿದಿದ್ದು, ಎಲ್ಲಾ ಸ್ಪರ್ಧಿಗಳು ‘ಬಿಗ್ ಬಾಸ್’ ಮನೆಯಿಂದ ಹೊರಗೆ ಕರೆತಂದು ಸ್ಟುಡಿಯೋ ಆವರಣದಲ್ಲಿದ್ದ ಥಿಯೇಟರ್ ಗೆ ಕರೆತರಲಾಗಿದೆ. ನಂತರ ‘ಬಿಗ್ ಬಾಸ್’ ಸ್ಪರ್ಧಿಗಳನ್ನು ಬೇರೆ ಕಡೆಗೆ ವಾಹನಗಳಲ್ಲಿ ಕರೆದೊಯ್ಯಲಾಗಿದೆ.

‘ಬಿಗ್ ಬಾಸ್’ ಸ್ಟುಡಿಯೋ ಬಂದ್ ಮಾಡಲಾಗಿದೆ. ಚಿತ್ರೀಕರಣ ಸ್ಥಗಿತ ಮಾಡಿ ಎಲ್ಲಾ ಸ್ಪರ್ಧಿಗಳನ್ನು ಶಿಫ್ಟ್ ಮಾಡಲಾಗಿದೆ. ಅವರನ್ನು ಒಂದೆರಡು ದಿನ ಹೋಟೆಲ್ ನಲ್ಲಿ ಇರಿಸಿ ನಂತರ ಬೇರೆ ಸ್ಟುಡಿಯೋಗೆ ಸ್ಥಳಾಂತರಿಸಲಾಗುವುದು. ಬೇರೆ ಸ್ಟುಡಿಯೋದಲ್ಲಿ ‘ಬಿಗ್ ಬಾಸ್’ ಶೋ ಮತ್ತೆ ನಡೆಯಲಿದ್ದು, ಚಿತ್ರೀಕರಣ ಶುರುವಾಗಲಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular