ಮೈಸೂರು: ಲಾರಿ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುರೇಶ್(63), ಮಾದೇವ್(52) ಮೃತಪಟ್ಟವರು ಎಂದು ಹೇಳಲಾಗಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಅರಸು ಕಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಗೆ ಬೆಂಕಿ ತಗುಲಿ ಹೊತ್ತಿ ಉರಿದು ಬೆಂಕಿ ತಗುಲಿದೆ. ಬೈಕ್ ನಲ್ಲಿದ್ದ ಸುರೇಶ್ ಮತ್ತು ಮಾದೇವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

