ದಾವಣಗೆರೆ: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾಗಿ ಗ್ರಾಮ ಆಡಳಿತಾಧಿಕಾರಿ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಸಮೀಪ ನಡೆದಿದೆ.
ಹೆಚ್. ತಿಲಕ್ ಕುಮಾರ್(48) ಮೃತಪಟ್ಟವರು ಎಂದು ಹೇಳಲಾಗಿದೆ. ಹೊನ್ನಾಳಿ ಪಟ್ಟಣದ ದುರ್ಗಿಗುಡಿ ನಿವಾಸಿಯಾಗಿರುವ ಹೆಚ್. ತಿಲಕ್ ಕುಮಾರ್ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕೋಗಲೂರು ಗ್ರಾಮದಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಕಾರ್ಯನಿವರ್ಹಿಸುತ್ತಿದ್ದರು.
ಬೈಕ್ ನಲ್ಲಿ ಬರುವಾಗ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಅಪಘಾತದಲ್ಲಿ ಗಾಯಗೊಂಡು ಮೃತಪಟ್ಟಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.