ಶಿವಮೊಗ್ಗ: ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮಲಗನಕೆರೆ ಗೇಟ್ ಬಳಿ ನಡೆದಿದೆ.
ಸುದೀಪ್ ನಾಯಕ್(26), ರಾಜ ನಾಯಕ್(30) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತ ರಾಜ ನಾಯಕ್ ಗೆ ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿತ್ತು ಎನ್ನಲಾಗಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

