ಶಿವಮೊಗ್ಗ: ಬೈಕ್ ನಲ್ಲಿ ತೆರಳುವಾಗ ಒಣಗಿದ ಮರ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ತಾರಿಗ ಗ್ರಾಮದ ಬಳಿ ನಡೆದಿದೆ.
26 ವರ್ಷದ ಸಂತೋಷ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ತಾರಿಗ ಗ್ರಾಮದ ಬಳಿ ಘಟನೆ ನಡೆದಿದೆ. ಘಟನೆಯಲ್ಲಿ ವೀರಭದ್ರ ಎಂಬುವರು ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

