ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಸಮೀಪ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ.
ಅಪರಿಚಿತ ವಾಹನ ಡಿಕ್ಕಿಯಾಗಿ ಮಧುಸೂದನ್(21) ಸಾವನ್ನಪ್ಪಿದ್ದಾರೆ. ಮಾಗಡಿ ತಾಲೂಕಿನ ಬೈರಸಾಗರ ಗ್ರಾಮದ ನಿವಾಸಿಯಾಗಿರುವ ಮಧುಸೂದನ್ ಬೈಕ್ ನಲ್ಲಿ ಮನೆಗೆ ತೆರಳುವಾಗ ಅಪಘಾತ ಸಂಭವಿಸಿದೆ. ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

