ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಮದಕರಿಪುರ ಬಳಿ ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಚ್ಚಬೋರನಟ್ಟಿ ಗ್ರಾಮದ ರಮೇಶ(35) ಮೃತಪಟ್ಟವರು ಎಂದು ಹೇಳಲಾಗಿದೆ. ಬೈಕ್ ಗೆ ಡಿಕ್ಕಿಯಾಗಿ ಬೆಂಕಿ ಕಾಣಿಸಿಕೊಂಡು ಬಸ್ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಖಾಸಗಿ ಬಸ್ ನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. ಹೊಸಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದು ಬೆಂಕಿ ತಗುಲಿ ಹೊತ್ತಿ ಉರಿದಿದೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.