ದಾವಣಗೆರೆ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹನಗವಾಡಿ ಗ್ರಾಮದ ಬಳಿ ಘಟನೆ ನಡೆದಿದೆ.
ಹೊಸಹಳ್ಳಿಯ ನವೀನ ಎನ್.ಎಂ.(33), ಶಶಿಕುಮಾರ್(32) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪಡಿಶೀಲನೆ ನಡೆಸಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

