ನವದೆಹಲಿ: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ಪಕ್ಷದ ಹೈಕಮಾಂಡ್ ನೇಮಕ ಮಾಡಿದೆ.
ಜಿಬಿಎ ಚುನಾವಣಾ ಉಸ್ತುವಾರಿಯಾಗಿ ರಾಮ್ ಮಾಧವ್ ಅವರನ್ನು ನೇಮಕ ಮಾಡಲಾಗಿದೆ. ಸಹ ಉಸ್ತುವಾರಿಗಳಾಗಿ ಸತೀಶ್ ಪೂನಿಯಾ ಮತ್ತು ಸಂಜಯ್ ಉಪಾಧ್ಯಾಯ ಅವರನ್ನು ನೇಮಕ ಮಾಡಲಾಗಿದೆ.
ಅದೇ ರೀತಿ ಕೇರಳ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ವಿನೋದ್ ತಾವ್ಡೆ ನೇಮಕ ಮಾಡಲಾಗಿದೆ. ಸಹ ಉಸ್ತುವಾರಿಯಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ನೂತನ ಅಧ್ಯಕ್ಷ ನಿತಿನ್ ನಬಿನ್ ಆದೇಶ ಹೊರಡಿಸಿದ್ದಾರೆ.

