HomeKarnatakaBREAKING : ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು : ಜನವರಿ 9 ರ ಪ್ರತಿಭಟನೆ...

BREAKING : ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು : ಜನವರಿ 9 ರ ಪ್ರತಿಭಟನೆ ಕೈಬಿಟ್ಟ ಬಿಜೆಪಿ

ಬೆಂಗಳೂರು : ಕರಸೇವಕ ಶ್ರೀಕಾಂತ್ ಪೂಜಾರಿಗೆ ಷರತ್ತು ಬದ್ಧ ಜಾಮೀನ ಸಿಕ್ಕಿರುವ ಹಿನ್ನೆಲೆಯಲ್ಲಿ ಬಿಜೆಪಿ ಜನವರಿ 9 ರಂದು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಕೈಬಿಟ್ಟಿದೆ.

ಜನವರಿ 9  ರಂದು ನಿಗದಿಯಾಗಿದ್ದ ಪ್ರತಿಭಟನೆ ವಾಪಸ್‌ ಪಡೆದಿದೆ. ಹುಬ್ಬಳ್ಳಿ ಶಹರಾ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕುವ ನಿರ್ಧಾರವನ್ನು ಕೈಬಿಟ್ಟಿದೆ. ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು ಮಾಡಿ ಹುಬ್ಬಳ್ಳಿಯ 1 ನೇ ಹೆಚ್ಚುವರಿ ಕೋರ್ಟ್ ಆದೇಶ ಹೊರಡಿಸಿದೆ.

ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ 1992ರಲ್ಲಿ ದೇಶಾದ್ಯಂತ ನಡೆದಿದ್ದ ಗಲಭೆಗಳ ವೇಳೆ ಹುಬ್ಬಳ್ಳಿಯಲ್ಲಿ ಸಂಭವಿಸಿದ್ದ ಕೋಮುಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕಾಂತ ಪೂಜಾರಿ ವಿರುದ್ಧದ ಜಾಮೀನು ಅರ್ಜಿಯ ಆದೇಶವನ್ನು ಹುಬ್ಬಳ್ಳಿ ನ್ಯಾಯಾಲಯವು ಶುಕ್ರವಾರ ಪ್ರಕಟಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1992 ರಲ್ಲಿ ರಾಮಮಂದಿರ ಹೋರಾಟ ಸಂಬಂಧ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಾಟೆಯಲ್ಲಿ ಶ್ರೀಕಾಂತ್ ಪೂಜಾರಿ ಭಾಗಿಯಾಗಿದ್ದರು. ಈ ಹಿನ್ನೆಲೆ ಇತ್ತೀಚೆಗೆ ಅವರನ್ನು ಬಂಧಿಸಲಾಗಿತ್ತು . ಇದರಿಂದ ರಾಜ್ಯದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು.

For Latest News Updates, Join Our Whatsapp Community🚩
RELATED ARTICLES

Most Popular